ಪುತ್ತೂರು: SKJM ಕೂರ್ನಡ್ಕ ರೇಂಜ್ ಆಶ್ರಯದಲ್ಲಿ ಸವನೂರಿನಲ್ಲಿ ನಡೆದ ಮದ್ರಸ ವಿದ್ಯಾರ್ಥಿಗಳ ಕಲಾ ಮತ್ತು ಸಾಹಿತ್ಯ ಸ್ಪರ್ಧೆಯಾದ ‘ಮುಸಾಬಕ’ದಲ್ಲಿ ಕೊರಿಂಗಿಲ ಮಿಸ್ಬಾಹುಲ್ ಹುದಾ ಮದ್ರಸದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮದ್ರಸದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಮದ್ರಸದ ಅಧ್ಯಾಪಕರು, ಆಡಳಿತ ಸಮಿತಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.


