
ಮಂಗಳೂರು: ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೊಟ್ಟಾರ ಚೌಕಿಯಿಂದ ಲೇಡಿಹಿಲ್ ನಾರಾಯಣ ಗುರು ವೃತ್ತದವರೆಗೆ ನೂತನ ಸ್ಮಾರ್ಟ್ ರಸ್ತೆ ಮಂಗಳೂರು ನಾಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣಗೊಳ್ಳಲಿದೆ.


ಈ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಮುಡಾ ಆಯುಕ್ತರು, ಅರ್ಕಿಟೆಕ್ಟ್ ಸುಪ್ರೀತ್ ಆಳ್ವ ಹಾಗೂ ಮೂಡ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ನಡಿಗೆಯ ಮೂಲಕ ದಾರಿಯುದ್ಧಕ್ಕೂ ರಸ್ತೆ ನಿರ್ಮಾಣದ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಸ್ತೆ ನಿರ್ಮಾಣದ ವೇಳೆ ಎದುರಾಗಬಹುದಾದ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕಾಮಗಾರಿಯನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪಾಲಿಕೆಯೊಡನೆ ಸಮನ್ವಯದೊಂದಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮೂಡ ಅಧ್ಯಕ್ಷರು ಮೂಡ ಅಧಿಕಾರಿಗಳಿಗೆ ಸೂಚನೆ ನೀಡಿದರು.


ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಿ ಪಾದಚಾರಿ ಹಾಗೂ ವಾಹನ ಸಂಚಾರಕ್ಕೆ ಸುಗಮ ಹಾಗೂ ಸುಂದರ ರಸ್ತೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಸ್ಮಾರ್ಟ್ ರಸ್ತೆ ಯೋಜನೆ ಮಹತ್ವದ ಕೊಡುಗೆಯಾಗಲಿದೆ.

