
ಕುಂಬಳೆ : ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಗ್ರಾರ್ ಹೊಳೆಯಿಂದ ಅನಧಿಕೃತವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಚಾಲಕನನ್ನು ಬಂಧಿಸಿದ್ದಾರೆ.

ಕುಂಬಳೆ ಎಸ್‌ಐ ಎಸ್ ಅನೂಪ್ ನೇತೃತ್ವದ ಪೊಲೀಸ್ ತಂಡವು ಮಡಿಮೊಗರು ಮೈಮೂನ ನಗರದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಈ ಕಾರ್ಯಾಚರಣೆ ನಡೆದಿದೆ.ಲಾರಿಯನ್ನು ತಡೆದು ಪರಿಶೀಲಿಸಿದಾಗ ಮೊಗ್ರಾರ್ ಹೊಳೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ದೃಢಪಟ್ಟಿದೆ.

ಈ ಸಂಬಂಧ ಬೊಂಬಾಣ ನಿವಾಸಿ, ಲಾರಿ ಚಾಲಕ ಮೊಹಮ್ಮದ್ ತಸ್ರೀಫ್ (27) ಎಂಬಾತನ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಲಾಗಿದ್ದು, ಮಾಲೀಕನ ಮೇಲೂ ಕ್ರಮ ಕೈಗೊಳ್ಳಲಾಗಿದೆ.
ವಶಪಡಿಸಿಕೊಂಡ ಮರಳು ಹಾಗೂ ಲಾರಿಯೊಂದಿಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾರುಪಡಿಸಲಾಗಿದೆ.


