ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರ ದಾಳಿ: ಮೂವರು ಸಿಆರ್‌ಪಿಎಫ್ (CRPF) ಯೋಧರಿಗೆ ಗಾಯ

ದೆಹಲಿ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಪ್ರದೇಶದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ (CRPF) ಯೋಧರು ಗಾಯಗೊಂಡಿದ್ದಾರೆ.

ಮಧ್ಯಾಹ್ನ ಸುಮಾರು 2:15ರ ವೇಳೆಗೆ ಬೈಕ್‌ನಲ್ಲಿ ಬಂದ ಉಗ್ರರು ಸಿಆರ್‌ಪಿಎಫ್ ಯೋಧರ ಪೋಸ್ಟ್‌ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಆರ್‌ಪಿಎಫ್ ಸಿಬ್ಬಂದಿ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿದ್ದಾರೆ.

ಗಾಯಗೊಂಡ ಯೋಧರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬೆನ್ನಲ್ಲೇ ಕ್ವಿಕ್ ರಿಯಾಕ್ಷನ್ ಟೀಮ್‌ಗಳನ್ನು (QRT) ಸ್ಥಳಕ್ಕೆ ರವಾನಿಸಲಾಗಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಮುನ್ನೆಚ್ಚರಿಕಾ ಕ್ರಮವಾಗಿ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ದಾಳಿ ನಡೆಸಿದ ಉಗ್ರರನ್ನು ಗುರುತಿಸಿ ಪತ್ತೆಹಚ್ಚಲು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!