ಕಾಸರಗೋಡಿನಲ್ಲಿ 28ರ ಹರೆಯದ ಯುವಕ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು : ಲೈಟ್‌ಹೌಸ್ ಕಡಪ್ಪುರ ಗಂಗಾನಗರದ ವಾಣಿನಿಲಯದ ನಿವಾಸಿ, ಗಲ್ಫ್‌ನಲ್ಲಿ ಹಿಂದೆ ಕೆಲಸ ಮಾಡಿ ಊರಿಗೆ ಮರಳಿ ನೆಲ್ಲಿಕುಂಜೆಯಲ್ಲಿ ವೆಲ್ಡಿಂಗ್ ಕಾರ್ಮಿಕನಾಗಿದ್ದ ಕೆ.ವಿ. ವಿಕೇಶ್ (28) ಎಂಬವರು ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಸಾವನ್ನಪ್ಪಿದ್ದಾರೆ.

ರಾತ್ರಿ ಊಟ ಮಾಡಿ ಮಲಗಲು ತೆರಳಿದ್ದ ಅವರು, ಮಂಗಳವಾರ ಬೆಳಿಗ್ಗೆಯಾದರೂ ರೂಮ್‌ನಿಂದ ಹೊರಬಾರದಿದ್ದಾಗ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಹಗ್ಗ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ವಿಕೇಶ್ ಅವರು ಮತ್ತೆ ಗಲ್ಫ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಆಘಾತಕಾರಿ ಘಟನೆ ನಡೆದಿದ್ದು, ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!