
ಪುತ್ತೂರು: ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ 14 ವರ್ಷ ವಯೋಮಿತಿಯ ಬಾಲಕಿಯರ ಕಬಡ್ಡಿ ತಂಡದ ತರಬೇತುದಾರರಾಗಿ ಖ್ಯಾತ ಕಬಡ್ಡಿ ಪಟು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಆಸಿಫ್ ತಂಬುತಡ್ಕ ಆಯ್ಕೆಯಾಗಿದ್ದಾರೆ.

ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ತೀರ್ಪುಗಾರರ ಸಮಿತಿಯ ಅಧ್ಯಕ್ಷರಾಗಿರುವ ಆಸಿಫ್ ತಂಬುತಡ್ಕ ಅವರು ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ರಾಜ್ಯಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಜಿಲ್ಲಾ ತಂಡದ ತರಬೇತುದಾರರಾಗಿ ಆಯ್ಕೆಯಾಗಿರುವುದು ಪುತ್ತೂರು ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ವಲಯದಲ್ಲಿ ಸಂತಸ ಮೂಡಿಸಿದೆ.


