ಕಾಸರಗೋಡು : ಕಾಸರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧೪ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ
ಬಾಲಕಿಯ ಸಂಬಂಧಿಕ ಸೇರಿದಂತೆ ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ ಆಗಸ್ಟ್ ತಿಂಗಳಲ್ಲಿ ಓಣಂ ಪರೀಕ್ಷೆಯ ಬಳಿಕ ಮೈಸೂರಿಗೆ ಕರೆದೊಯ್ದು ಅಲ್ಲಿ ಒಬ್ಬ ಸಂಬಂಧಿಕ ಲೈಂಗಿಕ ಕಿರುಕುಳ ನೀಡಿದ್ದಾನೆ.
ನಂತರ ಮೈಸೂರಿನಿಂದ ಮಂಗಳೂರಿಗೆ ಬರುವಾಗ ಬಸ್ಸಿನಲ್ಲಿ ಮತ್ತೊಬ್ಬರು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

