
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕಇದರ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 28 ಶನಿವಾರದಂದು ಬೆಳಿಗ್ಗೆ ಗಂಟೆ 10.00 ಕ್ಕೆ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ-2026 ,ಕೇರಳ- ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ಇದರ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- ಶತ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯಗಳ 100 ಕವಿಗಳಿಗೆ ತಮ್ಮ ಸ್ವರಚಿತ ಕವನಗಳನ್ನು ವಾಚಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಪತ್ರದ ಮೂಲಕ ಅಥವಾ ವಾಟ್ಸ್ಆ್ಯಪ್ ಮೂಲಕ ಕಳುಹಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.

ಕವನ ವಾಚಿಸುವ ಕವಿಗಳಿಗೆ ಪ್ರಮಾಣಪತ್ರ ಹಾಗೂ ಸಾಹಿತ್ಯ ಕೃತಿಗಳನ್ನು ನೀಡಿ ಗೌರವಿಸಲಾಗುವುದು. ಯಾವುದೇ ಪ್ರಯಾಣ ವೆಚ್ಚವನ್ನು ನೀಡಲಾಗುವುದಿಲ್ಲ. ಭಾಗವಹಿಸುವ ಕವಿಗಳು ಬೆಳಿಗ್ಗೆ 10 ಗಂಟೆಯ ಮೊದಲು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದವರು:
ಶಿವರಾಮ ಕಾಸರಗೋಡು
ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),
ಕನ್ನಡ ಗ್ರಾಮ, ಮೀಪುಗುರಿ–ಪಾರೆಕಟ್ಟೆ ರಸ್ತೆ,
ಕಾಸರಗೋಡು–671121.
ಮೊಬೈಲ್: 9448572016


