ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪುಟಾಣಿ ಸುಪ್ರೀತ್ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವದ ಮೂಲಕ ಉದ್ಘಾಟನೆಯನ್ನು ಮಾಡಲಾಯಿತು. ಸಾಮೂಹಿಕವಾಗಿ ಎಲ್ಲಾ ಮಕ್ಕಳ ಹುಟ್ಟುಹಬ್ಬ ಆಚರಿಸಲಾಯಿತು. ಮಕ್ಕಳಿಗೆ ಮನರಂಜನೆಗಾಗಿ ಛದ್ಮವೇಷ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು ಹಾಗೂ ಮಕ್ಕಳ ತಾಯಂದಿರಿಗೆ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಆ ದಿನ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯಾದ ಶ್ರೀಮತಿ ಅನ್ನಪೂರ್ಣ ಇವರು ಮಕ್ಕಳಿಗೆ ಶುಭ ಹಾರೈಸಿ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ರೋಟರಿ ಸಮುದಾಯದಳದ ಅಧ್ಯಕ್ಷರಾದ ಶ್ರೀ ಬಿ ಶ್ರೀನಿವಾಸ್ ರಾವ್ ಇವರು ಮಕ್ಕಳಿಗೆ ಶುಭ ಹಾರೈಸಿದರು ಹಾಗೂ ನಮ್ಮ ಊರಿನ ಗೌರವಾನ್ವಿತ ವ್ಯಕ್ತಿಯಾದ ವೆಂಕಟರಮಣ ಹೆಬ್ಬಾರ್ ಇವರು ಮಕ್ಕಳಿಗೆ ಶುಭ ಹಾರೈಸಿದರು .ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತ ಇವರು ಮಕ್ಕಳಿಗೆ ಶುಭ ಹಾರೈಸಿ ಮಕ್ಕಳನ್ನು ಯಾವ ರೀತಿ ಬೆಳೆಸಬೇಕೆಂದು ಮಾಹಿತಿ ನೀಡಿದರು.

ಜಯಂತ ರಾವ್ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ಗೌಡ ಉಪಸ್ಥಿತರಿದ್ದರು. ಪಂಚಾಯಿತಿ ಸದಸ್ಯರಾದ ಕೃಷ್ಣಮೂರ್ತಿ ಹೆಬ್ಬಾರ್ ಮಕ್ಕಳ ದಿನಾಚರಣೆಯನ್ನು ಆಚರಿಸಲು ಜವಾಹರ್ ಲಾಲ್ ನೆಹರು ಅವರ ಫೋಟೋವನ್ನು ಅಂಗನವಾಡಿಗೆ ಕೊಡುಗೆಯಾಗಿ ನೀಡಿದರು ಹಾಗೂ ಪಂಚಾಯತಿ ಸದಸ್ಯರಾದ ಪ್ರವೀಣ್ ಗೌಡ ಇವರು ಮಕ್ಕಳಿಗೆ ಶುಭ ಹಾರೈಸಿ ಎಲ್ಲ ಮಕ್ಕಳ ಪೋಷಕರು ಹಾಗೂ ಸ್ತ್ರೀ ಶಕ್ತಿ ಸದಸ್ಯರು ಹಾಜರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ಪವಿತ್ರ ಇವರು ಧನ್ಯವಾದವಿತ್ತರು

SHARE
Loading spinner

Leave a Reply

Your email address will not be published. Required fields are marked *

error: Content is protected !!