ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆ, ಕನಿಲದಲ್ಲಿ ಮಕ್ಕಳ ದಿನಾಚರಣೆ

ಹೊಸಂಗಡಿ, ನ. 14:ಕನಿಲದ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ಗಣೇಶ್ ಪಾವೂರ್, ಉಪಾಧ್ಯಕ್ಷರಾದ ಶ್ರೀ ಗಂಗಾಧರ ದುರ್ಗಿಪಳ್ಳ, ಕಾರ್ಯದರ್ಶಿ ಶ್ರೀ ಪದ್ಮನಾಭ ಕಡಪ್ಪರ, ಶಾಲಾ ಸಂಚಾಲಕರಾದ ಶ್ರೀ ದಯಾನಂದ, ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ಪಿ.ವಿ, ಉಪ ಪ್ರಾಂಶುಪಾಲರಾದ ಶ್ರೀಮತಿ ಮಾಲತಿ ಎ ಅವರು ಉಪಸ್ಥಿತರಿದ್ದು, ಮಕ್ಕಳಿಗೆ ಶುಭ ಹಾರೈಸಿದರು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!