ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ 24 ಗಂಟೆಗಳ ಹಗಲು-ರಾತ್ರಿ ಧರಣಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಯಮಬಾಹಿರವಾಗಿದ್ದು, ಅದನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ 24 ಗಂಟೆಗಳ ಹಗಲು-ರಾತ್ರಿ ಧರಣಿ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಸಮರ್ಥನೆ ನೀಡುವ ಮಾತುಗಳಿವೆಯೇ ಎಂದು ಪ್ರಶ್ನಿಸಿದರು. ಇಲ್ಲಿ ಟೋಲ್ ಗೇಟ್ ಅಗತ್ಯವಿಲ್ಲ ಎಂಬುದು ನಿಮ್ಮ ಅಂತರಾತ್ಮಕ್ಕೂ ತಿಳಿದಿರಬಹುದು ಎಂದು ಅವರು ಕುಟುಕಿದರು.

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ಹಲವು ಮಂದಿ ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!