ಮಂಜೇಶ್ವರ: ಮುಜಿಬೈಲ್ನಲ್ಲಿ ನಡೆದ ದುರಂತವೊಂದರಲ್ಲಿ ಸೆಂಟ್ರಿಂಗ್ ಕೆಲಸಗಾರರೊಬ್ಬರು ಕಟ್ಟಡದ ಮೇಲಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
ಕಿದೂರು ಪಾಡೆಕಲ್ಲು ನಿವಾಸಿ ಬಾಬು ಪೂಜಾರಿ ಅವರ ಪುತ್ರ ಸುರೇಶ್ (49) ದುರ್ಘಟನೆಗೆ ಬಲಿಯಾದ ದುರ್ದೈವಿ.

ಮುಜಿಬೈಲ್ನಲ್ಲಿ ಹೊಸ ಮನೆಯ ಕಾಮಗಾರಿಗಾಗಿ ಹಲಗೆ ಹಾಕುವ ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಹೊಸಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

