MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ

ಮಂಗಳೂರು: MRPL ಹಾಗೂ MSEZ ಸಂಸ್ಥೆಗಳಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

MRPL–MSEZ ಗುತ್ತಿಗೆ ಕಾರ್ಮಿಕರ ಹಾಗೂ ಸಂತ್ರಸ್ತರ ಹೋರಾಟ ಸಮಿತಿ, ಸ್ಥಳೀಯ ನಾಗರಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ MRPL ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಮತ್ತು ಜಿಲ್ಲೆಯ ಇತರ ಜನಪ್ರತಿನಿಧಿಗಳ ನೇತೃತ್ವದಲ್ಲಿ ಮಾತುಕತೆ ನಡೆಯಿತು.

ಈ ಸಂದರ್ಭದಲ್ಲಿ MRPL ಹಾಗೂ MSEZ ಸಂಸ್ಥೆಗಳಿಂದ ಕಾರ್ಮಿಕರು ಮತ್ತು ಸ್ಥಳೀಯ ನಾಗರಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಗುತ್ತಿಗೆ ಕಾರ್ಮಿಕರ ಬೇಡಿಕೆಗಳು ಹಾಗೂ ಸಂತ್ರಸ್ತರ ಅಹವಾಲುಗಳ ಕುರಿತು ಚರ್ಚಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!