ಬಂದ್ಯೋಡ್ ಪಟ್ಟಣಕ್ಕೆ ಹೊಸ ಮೆರುಗು;ಬಂದ್ಯೋಡ್ ಅಭಿವೃದ್ಧಿಗೆ 25 ಲಕ್ಷ ರೂ. ಮಂಜೂರು

ಬಂದ್ಯೋಡ್ ಪಟ್ಟಣದ ರೂಪುರೇಷೆಯನ್ನೇ ಬದಲಾಯಿಸುವ ಸೌಂದರ್ಯೀಕರಣ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ.


ಮಂಗಲ್ಪಾಡಿ ಗ್ರಾಮ ಪಂಚಾಯತ್ ಆಡಳಿತ ಸಮಿತಿಯ ನಿರಂತರ ಪ್ರಯತ್ನ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಿಗೆ ಸಲ್ಲಿಸಿದ ಮನವಿಯ ಫಲವಾಗಿ ಈ ಯೋಜನೆಗೆ 25 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು.
ಪ್ರಮುಖ ಕಾಮಗಾರಿಗಳನ್ನು ಆರಂಭಿಸುವುದಕ್ಕೆ ಮುನ್ನ ಕೈಗೊಳ್ಳಬೇಕಾದ ಪ್ರಾಥಮಿಕ ಹಂತದ ಕೆಲಸಗಳಿಗೆ ಇದೀಗ ಚಾಲನೆ ನೀಡಲಾಗಿದೆ.

ಪಟ್ಟಣದ ಸೌಂದರ್ಯ ಮತ್ತು ಸೌಲಭ್ಯಗಳನ್ನು ಹೆಚ್ಚಿಸುವುದರ ಜೊತೆಗೆ, ಸಂಚಾರ ದಟ್ಟಣೆಯನ್ನು ನಿಯಂತ್ರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳನ್ನು ಹೆಚ್ಚು ಜನಸ್ನೇಹಿಯಾಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಂದ್ಯೋಡ್ ಪಟ್ಟಣವನ್ನು ಮತ್ತಷ್ಟು ಆಕರ್ಷಕವಾಗಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!