
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರ ಅನುಮೋದನೆ ಮೇರೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರನ್ನಾಗಿ ಸುದರ್ಶನ್ ಜೈನ್ ಅವರನ್ನು ನೇಮಿಸಿ ಕೆಪಿಸಿಸಿ ಸಹಕಾರ ವಿಭಾಗ ಅಧ್ಯಕ್ಷ ಧನರಾಜ.ಎಸ್ ತಾಳಂಪಳ್ಳಿ ಗುರುವಾರ ಆದೇಶ ಹೊರಡಿಸಿದ್ದಾರೆ.


ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸುದರ್ಶನ್ ಜೈನ್ ಅವರು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಆರು ವರ್ಷಗಳ ಕಾಲ ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.



