
ಕೊಡ್ಲಮೊಗರು: ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರು ಇಲ್ಲಿ ಲಿಟಲ್ ಕೈಟ್ಸ್ ಜೂನಿಯರ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಾರ್ಡ್ ಸದಸ್ಯರಾದ ಶ್ರೀ ಗೋಪಾಲಕೃಷ್ಣ ಪಜ್ವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಪಿ ಟಿ ಎ ಉಪಾಧ್ಯಕ್ಷರಾದ ಅಝೀಝ್ ಅಧ್ಯಕ್ಷತೆ ವಹಿಸಿದ್ದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಅನಿಮೇಷನ್, ರೋಬೋಟಿಕ್ಸ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಆಸಕ್ತಿ ಮತ್ತು ಸೃಜನಶೀಲತೆಯನ್ನು ಬೆಳೆಸುವಲ್ಲಿ ಲಿಟಲ್ ಕೈಟ್ಸ್ ಘಟಕದ ಮಹತ್ವವನ್ನು ತಿಳಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.



ಶಾಲಾ ಮುಖ್ಯೋಪಾಧ್ಯಾಯಿನಿ ಸ್ವಾಗತಿಸಿ ಕೃಷ್ಣವೇಣಿ ಬಿ ಸ್ವಾಗತಿಸಿ ಉಷಾಬೇಬಿ ವಂದಿಸಿದರು.ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


