ಶಬರಿಗಿರಿಯ ಪ್ರಕೃತಿ ಸೌಂದರ್ಯಕ್ಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮೆಚ್ಚುಗೆ; ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಕೆ

ಬದಿಯಡ್ಕ: ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬದಿಯಡ್ಕದ ಶಬರಿಗಿರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಶಬರಿಗಿರಿಯ ಸುಂದರ ಪರಿಸರದಲ್ಲಿ ಸೂರ್ಯಾಸ್ತಮಾನದ ಮನಮೋಹಕ ದೃಶ್ಯವನ್ನು ವೀಕ್ಷಿಸಿದ ಅವರು, ಅಲ್ಲಿನ ಪ್ರಕೃತಿಯ ಸೊಬಗನ್ನು ಮನಸಾರೆ ವರ್ಣಿಸಿದರು. ಪ್ರಕೃತಿಯ ಮಡಿಲಿನಲ್ಲಿ ರೂಪುಗೊಳ್ಳುತ್ತಿರುವ ಈ ಪುಣ್ಯಕ್ಷೇತ್ರದ ಸೌಂದರ್ಯ ಹಾಗೂ ಪರಿಸರದ ಪ್ರಶಾಂತತೆಯನ್ನು ಪ್ರಶಂಸಿಸಿದರು.

ಶ್ರೀ ಅಯ್ಯಪ್ಪ ಸ್ವಾಮಿಯ ಪ್ರತಿಷ್ಠಾಪನೆಯೊಂದಿಗೆ ನಡೆಯಲಿರುವ ಪುನರ್ ನಿರ್ಮಾಣ ಪ್ರತಿಷ್ಠಾ ಕಲಶೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿ. ಈ ಪುಣ್ಯ ಕಾರ್ಯಕ್ಕೆ ಕೈಜೋಡಿಸುತ್ತಿರುವ ಎಲ್ಲರಿಗೂ ಶ್ರೀ ಅಯ್ಯಪ್ಪ ಸ್ವಾಮಿಯ ಅನುಗ್ರಹ ಲಭಿಸಲಿ ಎಂದು ಅವರು ಹಾರೈಸಿದರು.

ಈ ಸಂದರ್ಭದಲ್ಲಿ ನಡೆದಿರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಪ್ರಚಾರ ಸಮಿತಿ ಅಧ್ಯಕ್ಷ ಅಖಿಲೇಶ್ ನಗುಮುಗಂ , ಮಂದಿರ
ಗುರುಸ್ವಾಮಿ ಕೃಷ್ಣ ಚುಳ್ಳಿಕ್ಕಾನ , ದೇವ ದಾಸ್ ಕಾಮತ್, ಶರತ್ ಶೆಟ್ಟಿ, ಸಂದೀಪ್ ರೈ ಮುಂತಾದವರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!