ಮಂಗಳೂರು–ಬಜ್ಪೆ ರಾಜ್ಯ ಹೆದ್ದಾರಿಯ ಕೈಕಂಬದವರೆಗೆ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯ ವಿರುದ್ಧ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ವತಿಯಿಂದ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಗಿತ್ತು.

ಈ ಹೋರಾಟದ ಫಲವಾಗಿ ಇಂದು ಬಜ್ಪೆ–ಕೈಕಂಬ ರಾಜ್ಯ ಹೆದ್ದಾರಿಯ ದುರಸ್ತಿ ಕಾರ್ಯ ಆರಂಭಗೊಂಡಿರುವುದಕ್ಕೆ ಸಂಬಂಧಪಟ್ಟ PWD ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿರಾಜ್ ಬಜ್ಪೆ ತಿಳಿಸಿದರು.
ಅದೇ ಸಂದರ್ಭದಲ್ಲಿ, ಕೇವಲ ತಾತ್ಕಾಲಿಕ ದುರಸ್ತಿಗೆ ಸೀಮಿತವಾಗದೆ, ಮುಂದಿನ ದಿನಗಳಲ್ಲಿ ಈ ರಾಜ್ಯ ಹೆದ್ದಾರಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಸುಸಜ್ಜಿತ ರಸ್ತೆಯನ್ನಾಗಿ ನಿರ್ಮಿಸಬೇಕೆಂಬ ಆಗ್ರಹವನ್ನು ಕೂಡ ಅವರು ವ್ಯಕ್ತಪಡಿಸಿದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಸಾರ್ವಜನಿಕ ಹಿತಕ್ಕಾಗಿ ನಿರಂತರ ಧ್ವನಿ ಎತ್ತುವುದು ನಮ್ಮ ವೇದಿಕೆಯ ಬದ್ಧತೆಯಾಗಿದೆ.

