ಉಪ್ಪಳದಲ್ಲಿ ಬಸ್–ಲಾರಿ ಅಪಘಾತ:ಪ್ರಯಾಣಿಕನಿಗೆ ಗಂಭೀರ ಗಾಯ

ಉಪ್ಪಳ : ಟಯರ್ ಪಂಕ್ಚರ್ ಆಗಿ ಮಣ್ಣಂಕುಝಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಬಾಯಾರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಬಸ್ಸು ಎದುರಿನ ವಾಹನಕ್ಕೆ ದಾರಿ ಬಿಡುವಾಗ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಗೆ ಗುದ್ದಿದೆ.

​ಅಪಘಾತದಲ್ಲಿ ಮಣ್ಣಂಕುಝಿ ನಿವಾಸಿ ಇಸ್ಮಾಯಿಲ್ ಎಂಬವರ ತಲೆ ಹಾಗೂ ಕಣ್ಣಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತರ ಗಾಯಾಳುಗಳನ್ನು ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆ ಹಾಗೂ ಉಪ್ಪಳ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ನೀಡಿ ಬಿಡುಗಡೆಗೊಳಿಸಲಾಗಿದೆ. ಬಸ್ ಮುಂಭಾಗಕ್ಕೆ ಹಾನಿಯಾಗಿದ್ದು, ರಸ್ತೆಯಲ್ಲೇ ವಾಹನ ನಿಲ್ಲಿಸುವುದು ಅಪಘಾತಗಳಿಗೆ ದಾರಿಯಾಗುತ್ತಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!