ಮಂಗಳೂರು: ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ನ.23ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಅವರು, 11.30ಕ್ಕೆ ನಗರದ ಪುರಭವನದಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ನಗರದ ತಾಜ್ ವಿವಾಂತ ಹೋಟೆಲ್ನಲ್ಲಿ ಜಿಲ್ಲೆಯ ಪ್ರಮುಖ ಆಹ್ವಾನಿತರೊಂದಿಗೆ ಆಯೋಜಿಸಿರುವ ಸ್ನೇಹಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬಳಿಕ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನ.24ರಂದು ಬೆಳಿಗ್ಗೆ 11.40ಕ್ಕೆ ಮಂಗಳೂರಿನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಲಿದ್ದಾರೆ.

