ಕನಿಲ ಶ್ರೀ ಭಗವತಿ ಶಾಲೆಯಲ್ಲಿ “ವಿಸ್ಮಯಂ” ಸಂಭ್ರಮದ ಶಾಲಾ ವಾರ್ಷಿಕೋತ್ಸವ

ಮಂಜೇಶ್ವರ: ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆ ಕನಿಲ, ಮಂಜೇಶ್ವರ ಇಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ “ವಿಸ್ಮಯಂ 2026” ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭ ಮಾಡಲಾಯಿತು. ಕನಿಲ ಶ್ರೀ ಭಗವತಿ ಕ್ಷೇತ್ರದ ಶ್ರೀ ಮಂಜಪ್ಪ ಕಾರ್ನವರ್ ಅವರು ದೀಪ ಬೆಳಗಿಸಿದರು. ಖ್ಯಾತ ನೇತ್ರ ತಜ್ಞೆ ಡಾ. ಪ್ರಭಿತಾ ಪಿ.ಬಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀ ಪದ್ಮನಾಭ ಕಡಪ್ಪರ ಅವರು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ಪಿ.ವಿ. ಅವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ್ ಪಾವೂರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಶೀರ್ ಕನಿಲ ಹಾಗೂ ವಾರ್ಡ್ ಸದಸ್ಯ ಶ್ರೀ ರತ್ನಾಕರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಗಂಗಾಧರ್ ದುರ್ಗೀಪಳ್ಳ,ಖಜಾಂಚಿ ಶ್ರೀ ಸುರೇಶ್ ಬಿ.ಎಂ,ಉಪಕಾರ್ಯದರ್ಶಿ ಶ್ರೀ ಉದಯ ಕುಮಾರ್,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ.ಹೆಚ್,ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ .ಎಸ್, ಶಾಲಾ ಸಂಚಾಲಕರಾದ ಶ್ರೀ ದಯಾನಂದ ಎಂ.ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪ ಪ್ರಾಂಶುಪಾಲರಾದ ಶ್ರೀಮತಿ ಮಾಲತಿ ಎಂ. ಅವರು ವಂದನಾರ್ಪಣೆ ಸಲ್ಲಿಸಿದರು.

ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ನೆರೆದಿದ್ದ ಪ್ರೇಕ್ಷಕರ ಮನ ಗೆದ್ದರು.

ಕಾರ್ಯಕ್ರಮದಲ್ಲಿ ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!