ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳವಾರ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ಥಳೀಯ ಸಮಸ್ಯೆಗಳು, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಮತ್ತು ಸಾರ್ವಜನಿಕ ಬೇಡಿಕೆಗಳ ಕುರಿತು ಸಂಸದರ ಮುಂದಿಟ್ಟರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿದ ಸಂಸದರು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕಾರ್ಪಣೆ, ಸುಬ್ರಹ್ಮಣ್ಯ – ಸಕಲೇಶಪುರ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿ, ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಗೊಂಡ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಮಂಗಳೂರು – ಬೆಂಗಳೂರು ರೈಲು ಮಾರ್ಗದ ದ್ವಿಪಥಕ್ಕಾಗಿ ನಿರಂತರ ಪ್ರಯತ್ನ ನಡೆಸುತ್ತಿರುವುದಕ್ಕಾಗಿ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಂಸದರನ್ನು ಭೇಟಿಯಾಗಿ ಅಭಿನಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!