ವಿದ್ವತ್ ಪಿಯು ಕಾಲೇಜಿನಲ್ಲಿ ನ.27ರಂದು ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿ

ಗುರುವಾಯನಕೆರೆ: ವಿದ್ವತ್ ಎಜುಕೇಶನ್ ಫೌಂಡೇಶನ್ ವತಿಯಿಂದ ಉಬಾರ್ ಚೆಸ್ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ (DKCA) ಸಹಯೋಗದಲ್ಲಿ ಅಂತರ್ ಜಿಲ್ಲಾ ಶಾಲಾ ಮಟ್ಟದ ರಾಪಿಡ್ ಚೆಸ್ ಪಂದ್ಯಾವಳಿ ‘ವಿದ್ವತ್ ಚೆಸ್ ಟ್ರೋಫಿ-2026’ ನವೆಂಬರ್ 27ರಂದು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಉಬಾರ್ ಚೆಸ್ ಅಕಾಡೆಮಿಯ ನಿರ್ದೇಶಕ ಜಗನ್ನಾಥ್ ಅಡಪ ಅವರ ನೇತೃತ್ವದಲ್ಲಿ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಅಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಜರುಗಲಿದೆ.

ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ 8, 10, 12, 14, 16 ಹಾಗೂ 18 ವರ್ಷ ವಯೋಮಿತಿಯ ಆಧಾರದಲ್ಲಿ ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಉಬಾರ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ವಿಭಾಗಗಳನ್ನೂ ಆಯೋಜಿಸಲಾಗಿದೆ. ಪಂದ್ಯಾವಳಿಯಲ್ಲಿ ಒಟ್ಟು 264 ಟ್ರೋಫಿಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ.

ಅಂತರ್ ಜಿಲ್ಲಾ ಸ್ಪರ್ಧಿಗಳಿಗೆ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ತಲಾ ಏಳು ಟ್ರೋಫಿಗಳನ್ನು ನೀಡಲಾಗುವುದು. ಉಬಾರ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗಾಗಿ 15 ವಿಶೇಷ ಟ್ರೋಫಿಗಳನ್ನು ಮೀಸಲಿಡಲಾಗಿದೆ. ಭಾಗವಹಿಸುವ ಸ್ಪರ್ಧಿಗಳಿಗೆ ಮಧ್ಯಾಹ್ನದ ಊಟ ಹಾಗೂ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದೆ.

ಪಂದ್ಯಾವಳಿಗೆ ಪ್ರವೇಶ ಶುಲ್ಕ 550 ರೂ. ಆಗಿದ್ದು, ನವೆಂಬರ್ 25 ನೋಂದಣಿಗೆ ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು www.chessfee.com ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಉಬಾರ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಮಾತ್ರ 9620469172 ಸಂಖ್ಯೆಯನ್ನು ಸಂಪರ್ಕಿಸಿ ಆಫ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ 9008857064 ಅಥವಾ 9731771990 ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!