ಶಬರಿಮಲೆ ಯುವತಿಯರ ಪ್ರವೇಶ ಪ್ರಕರಣ: ಕ್ರಿಸ್‌ಮಸ್ ರಜೆಗೂ ಮುನ್ನ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಸಾಧ್ಯತೆ

ನವದೆಹಲಿ: ಶಬರಿಮಲೆ ಯುವತಿಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಕ್ರಿಸ್‌ಮಸ್ ರಜೆಗೆ ಮುನ್ನ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಸಂವಿಧಾನ ಪೀಠದ ಸದಸ್ಯೆಯಾಗಿರುವ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಕ್ನಾನಾಯ ಕ್ಯಾಥೋಲಿಕ್ ಚರ್ಚ್‌ಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ನ್ಯಾಯಮೂರ್ತಿ ನಾಗರತ್ನ ಅವರು ಈ ವಿಚಾರವನ್ನು ತಿಳಿಸಿದ್ದಾರೆ.ಇದೇ ವೇಳೆ, ಶಬರಿಮಲೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾನ್ಸ್‌ಜೆಂಡರ್ ವೆಲ್ಫೇರ್ ಬೋರ್ಡ್ ಸದಸ್ಯೆ ಅನುಶ್ರೀ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಶಬರಿಮಲೆಯಲ್ಲಿ ಪ್ರವೇಶ ನಿರಾಕರಿಸಲಾಗಿದೆ, ಅನುಚಿತವಾಗಿ ವರ್ತಿಸಲಾಗಿದೆ ಹಾಗೂ ಅಕ್ರಮವಾಗಿ ಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿ ಅನುಶ್ರೀ ಅರ್ಜಿ ಸಲ್ಲಿಸಿದ್ದರು. ಆದರೆ, ಘಟನೆ ಕೇರಳದಲ್ಲಿ ನಡೆದಿರುವಾಗ ತಮಿಳುನಾಡಿನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಸಾಧ್ಯ ಎಂದು ನ್ಯಾಯಾಲಯ ಪ್ರಶ್ನಿಸಿದೆ.ಅನುಶ್ರೀ ಸೇರಿದಂತೆ ಒಟ್ಟು 15 ಮಂದಿ ಟ್ರಾನ್ಸ್‌ಜೆಂಡರ್‌ಗಳು ಶಬರಿಮಲೆ ದರ್ಶನಕ್ಕಾಗಿ ತೆರಳಿದ್ದರು.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್‌ಮುರಗನ್ ಅವರನ್ನೊಳಗೊಂಡ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!