ಕೇರಳಂ :ರಾಜ್ಯದ 9 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಇಂದು ಪ್ರತ್ಯೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಂಬತ್ತು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.

ನಾಳೆ ಮತ್ತು ನಾಡಿದ್ದು ತಿರುವನಂತಪುರಂನಿಂದ ಇಡುಕ್ಕಿ ಜಿಲ್ಲೆಯವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

24 ಗಂಟೆಗಳ ಅವಧಿಯಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾದರೆ ಅದನ್ನು ಭಾರಿ ಮಳೆ ಎಂದು ಪರಿಗಣಿಸಲಾಗುತ್ತದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!