ಬೇವ್ಯೂ ಲಿಟಲ್ ಸ್ಕೂಲ್ ಪ್ರಾಂಶುಪಾಲೆ ಡಾ. ಸಜಿತಾ ಕೃಷ್ಣ ಅವರಿಗೆ ಐಟಿಒ ಎಕ್ಸಲೆನ್ಸ್ ಪ್ರಶಸ್ತಿ

ಮಂಗಳೂರು: ಬೇವ್ಯೂ ಲಿಟಲ್ ಸ್ಕೂಲ್‌ನ ಪ್ರಾಂಶುಪಾಲೆ ಡಾ. ಸಜಿತಾ ಕೃಷ್ಣ ಅವರು ಶೈಕ್ಷಣಿಕ ನಾಯಕತ್ವ ಹಾಗೂ ಸಮನ್ವಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಐಟಿಒ ಎಕ್ಸಲೆನ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೆಂಬರ್ 23ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಿಕ್ಷಣ ಕ್ಷೇತ್ರದಲ್ಲಿ 14 ವರ್ಷಗಳಿಗೂ ಅಧಿಕ ಅನುಭವ ಹೊಂದಿರುವ ಡಾ. ಸಜಿತಾ ಕೃಷ್ಣ ಅವರು ದೂರದೃಷ್ಟಿಯ ನಾಯಕತ್ವ, ಬದ್ಧತೆ ಹಾಗೂ ಶೈಕ್ಷಣಿಕ ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ವಿವಿಧ ಒಲಿಂಪಿಯಾಡ್ ಪರೀಕ್ಷೆಗಳ ಸಮನ್ವಯ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಅವರ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸುವಲ್ಲಿ ಅವರು ಸಲ್ಲಿಸಿರುವ ಸೇವೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಸಾಮರ್ಥ್ಯವನ್ನು ಗುರುತಿಸಿ ಬೆಳೆಸುವ ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ತೋರುತ್ತಿರುವ ಸಮರ್ಪಣಾ ಮನೋಭಾವಕ್ಕೆ ಈ ಪ್ರಶಸ್ತಿ ಸಂದ ಗೌರವವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!