
ಕಾಸರಗೋಡು : ನಾಯಕ್ಸ್ ರಸ್ತೆಯಲ್ಲಿರುವ ಚರ್ಮರೋಗ ತಜ್ಞ ಡಾ. ನರಹರಿ ಅವರ ಕ್ಲಿನಿಕ್‌ಗೆ ನುಗ್ಗಿದ ಕಳ್ಳರು ಹಣ ಹಾಗೂ ಇತರ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕಪಾಟಿನಲ್ಲಿದ್ದ 25,000 ನಗದು, ಒಂದು ಮೊಬೈಲ್ ಫೋನ್ ಮತ್ತು ಸಿಸಿಟಿವಿ ಉಪಕರಣಗಳನ್ನು ಕಳವು ಮಾಡಲಾಗಿದೆ.

ಗುರುವಾರ ಬೆಳಿಗ್ಗೆ ಶುಚೀಕರಣ ಸಿಬ್ಬಂದಿ ಬಂದಾಗ ಬಾಗಿಲು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬುಧವಾರ ರಾತ್ರಿ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

ಸಿಬ್ಬಂದಿ ನೀಡಿದ ಮಾಹಿತಿಯಂತೆ ಡಾ. ನರಹರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಆರಂಭಿಸಿದ್ದು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.


