ಅಮೃತ ಪ್ರಕಾಶ ಪತ್ರಿಕೆ ಹಾಗೂ ಅಶೋಕನಗರ ಆಂಗ್ಲ ಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ 123ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಅಮೃತ ಪ್ರಕಾಶ ಪತ್ರಿಕೆ ಹಾಗೂ ಅಶೋಕನಗರ ಆಂಗ್ಲ ಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ123ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಅಶೋಕನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವೆಂಬರ್ 28ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶೋಕನಗರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿಣಿ ಶ್ರೀಮತಿ ಪೂರ್ಣಿಮಾ ವಹಿಸಿ ಕಾರ್ಯಕ್ರಮಕೆ ಶುಭ ಹಾರೈಸಿದರು.. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ತುಳು ಕನ್ನಡ ಬರಹಗಾರ್ತಿ ರೂಪಕಲಾ ಆಳ್ವ ಅವರು ಮಾತನಾಡುತ್ತಾ ಸಾಹಿತ್ಯ ನಮಗೆ ಸಂತೋಷವನ್ನು ನೀಡುತ್ತದೆ. ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು .

ಹಿರಿಯ ಸಾಹಿತಿ ಎನ್ ಸುಬ್ರಾಯ ಭಟ್ ಮಾತನಾಡುತ್ತಾ ವಿದ್ಯಾರ್ಥಿಗಳು ಗುರುವಿಗೆ ಅಗ್ರಸ್ಥಾನ ನೀಡಬೇಕು , ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಸಾಹಿತ್ಯದಿಂದ ಸಾಧ್ಯ ಎಂದರು . ಮತ್ತೋರ್ವ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಆಗಮಿಸಿದ್ದ ಸಂಗೀತ ಸಾಧಕಿ ರೂವಾರಿ ಡಾಟ್ ಕಾಮ್ ಡಿಜಿಟಲ್ ಪತ್ರಿಕೆ ಪ್ರಧಾನ ಸಂಪಾದಕಿ ಶ್ರೀಮತಿ ರತ್ನಾವತಿ. ಜೆ .ಬೈಕಾಡಿ ಮಕ್ಕಳು ಮೊಬೈಲಿಗೆ ಹೆಚ್ಚು ಆಸಕ್ತಿ ವಹಿಸುವುದರ ಬದಲು ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಮೃತ ಪ್ರಕಾಶ ಪತ್ರಿಕೆ , ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು , ನಿವೃತ್ತ ಶಿಕ್ಷಕಿ ಹಾಗೂ ಸಾಹಿತಿ ಡಾ. ಅರುಣ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರಾಜೇಶ್ವರಿ ವಂದಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!