ಕುಂದಾಪುರ: ವಿಶ್ವದಾದ್ಯಂತ ನೆಲೆಸಿರುವ ರಾಮ ಕ್ಷತ್ರಿಯ ಸಮಾಜದ ವೈದ್ಯರು, ವಕೀಲರು, ಇಂಜಿನಿಯರ್ಗಳು, ಚಾರ್ಟರ್ಡ್ ಅಕೌಂಟೆಂಟ್ಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಡಿಸೆಂಬರ್ 20ರಂದು ಬ್ರಹ್ಮಾವರದಲ್ಲಿ ‘ರಾಮ ಕ್ಷತ್ರಿಯ ವೃತ್ತಿಪರರ ಸಮಾವೇಶ ವೈಭವ 2026’ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಸದಸ್ಯರು ಭಾಗವಹಿಸುವ ನಿರೀಕ್ಷೆಯಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮವು ಸಮಾಜದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ಪಡೆಯಲು ಸಹಕಾರಿಯಾಗಲಿದೆ ಎಂದು ವಿಶ್ವ ರಾಮ ಕ್ಷತ್ರಿಯ ಮಹಾಸಂಘ (ರಿ.), ಕುಂದಾಪುರ ಇದರ ಅಧ್ಯಕ್ಷ ಎಚ್.ಆರ್. ಶಶಿಧರ್ ನಾಯಕ್ ತಿಳಿಸಿದರು.

ಕೋಟೇಶ್ವರದ ಕಾಮಧೇನು ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೈಂದೂರಿನ ಶ್ರೀರಾಮ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಶೇರೆಗಾರ್ ಬಿಜೂರು, ಕುಂದಾಪುರದ ರಕ್ಷಾ ಚಾರಿಟೇಬಲ್ ಟ್ರಸ್ಟ್ನ ಮಾಜಿ ಅಧ್ಯಕ್ಷ ಸುರೇಶ್ ಬೆಟ್ಟಿನ್, ಬೈಂದೂರಿನ ಉದ್ಯಮಿ ವೆಂಕಟರಮಣ ಬಿಜೂರು, ಉಡುಪಿ ಸಂಘದ ಹಿರಿಯರಾದ ಹೂವಯ್ಯ ಶೇರೆಗಾರ್, ಕುಂದಾಪುರದ ಶ್ರೀರಾಮ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗರಾಜ್ ಕಾಮಧೇನು, ಕುಂದಾಪುರ ರಾಮ ಕ್ಷತ್ರಿಯ ಯುವಕ ಮಂಡಲದ ಅಧ್ಯಕ್ಷ ನಾಗರಾಜ ದಫೆದಾರ್ ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷೆ ನಾಗರತ್ನ ಉಪಸ್ಥಿತರಿದ್ದರು.
ಸಮಾವೇಶದ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಆನಂದ ಮದ್ದೋಡಿ ಮಾಹಿತಿ ನೀಡಿದರು. ಸಮಾವೇಶ ಸಮಿತಿಯ ಅಧ್ಯಕ್ಷ ಅಶೋಕ್ ಬೆಟ್ಟಿನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಶ್ಮಿ ರಾಜ್ ಕಾರ್ಯಕ್ರಮ ನಿರೂಪಿಸಿದರು. ಇಂಜಿನಿಯರ್ ಸತೀಶ್ ಕಾವೇರಿ ವಂದಿಸಿದರು.

