ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ : ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು: ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮತ್ತು ಚರ್ಚ್‌, ಮಸೀದಿ ಮಂದಿರಗಳ ಮುಖ್ಯಸ್ಥರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ನಗರದ ನೆಹರೂ ಮೈದಾನದಲ್ಲಿ ನಡೆದ ಪಥಸಂಚಲನದೊಂದಿಗೆ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಂದೇಶ ಭಾಷಣದಲ್ಲಿ ಅವರು ಕರೆ ನೀಡಿದರು.

ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು ಎಂದರು.ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೂ ನಮನ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ವ್ಯಕ್ತಿಗಳ ಆದರ್ಶ ನಮ್ಮ ಯುವಪೀಳಿಗೆಯಲ್ಲಿ ಮೇಳ್ಳೆಸಬೇಕಿದೆ.

ನಮ್ಮ ದೇಶ ಚೈತನ್ಯಯುತ ಅಭಿವೃದ್ಧಿ ಶೀಲ ರಾಷ್ಟ್ರವಾಗಬೇಕಾದರೆ ನಮ್ಮಲ್ಲಿ ಭಾರತೀಯತೆ, ದೇಶದ ಭವ್ಯತೆ-ದಿವ್ಯತೆ ಮತ್ತು ಪಾವಿತ್ರ್ಯತೆಗಳ ಅರಿವು, ದೇಶಪ್ರೇಮ, ದೇಶಭಕ್ತಿ ಉಕ್ಕಿ ಹರಿಯಬೇಕು ಎಂದು ಅವರು ಹೇಳಿದರುಜಿಲ್ಲೆಯಲ್ಲಿ ಯಾವುದೇ ಬಾಹ್ಯ ಒತ್ತಡಕ್ಕೆ ಅವಕಾಶವಿಲ್ಲದೇ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೋಲಿಸ್ ಖೆಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಪ್ರಮುಖ ಪ್ರಕರಣಗಳ ಮೂಲವನ್ನು ಅರಿಯಲು ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಮುಖಂಡರೊಂದಿಗೆ ಶಾಂತಿ ಸೌಹಾರ್ಧ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಮೂಡಿಬಂದ ಒಮ್ಮತದ ಅಭಿಪ್ರಾಯದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಸಂಸದ ಕ್ಯಾ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸದಸ್ಯ ಹರೀಶ್‌ ಕುಮಾ‌ರ್, ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ, ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾ‌ರ್ ರೆಡ್ಡಿ,ಐಜಿಪಿ ಅಮಿತ್ ಸಿಂಗ್, ಎಸ್ಪಿ ಡಾ.ಅರುಣ್‌ ಕುಮಾರ್‌ ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ ವಿನಾಯಕ್ ನರ್ವಾಡೆ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!