ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.


ಬಿಹಾರ ರಾಜ್ಯದ ಅರ್ನೌಟ್ ಗ್ರಾಮದ ಹರ್ಷ ಕುಮಾರ್ (22 ) ಮತ್ತು ಶಾಪುರ್ ಗ್ರಾಮದ ಅಮರ್ ಕುಮಾರ (28) ಬಂಧಿತ ಆರೋಪಿಗಳು.
ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 75,000 ರೂಪಾಯಿ. ಆರೋಪಿಗಳು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ 2 ಮೊಬೈಲ್ ಪೋನ್‌ಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಾಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬಾತ ದಿಲ್ಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ .

SHARE
Loading spinner

Leave a Reply

Your email address will not be published. Required fields are marked *

error: Content is protected !!