ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ- ನೀರಿನ‌ ಟ್ಯಾಂಕ್ ನಲ್ಲಿ ಪತ್ತೆ

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಮಂಗಳೂರಿನ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ಪಶ್ಚಿಮ‌ ಬಂಗಾಳ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌


ಮುಕ್ಕದಲ್ಲಿರುವ ಖಾಸಗಿ ಎಸ್ಟೇಟ್ ನಲ್ಲಿ ಕೂಲಿ ನೌಕರನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ 2025ರ ಜೂನ್ 24ರಂದು ಕಾಣೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾಗಿದ್ದ ಮುಖೇಶ್ ಮಂಡಲ್ ನ ಮೃತದೇಹ 2025ರ ಆಗಸ್ಟ್ 21 ರಂದು ಎಸ್ಟೇಟ್ ನ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿತ್ತು.

SHARE
Loading spinner

Leave a Reply

Your email address will not be published. Required fields are marked *

error: Content is protected !!