ತುಳು ಸಿನಿಮಾ ‘ಪಿದಾಯಿ’ ಸೆಪ್ಟೆಂಬರ್ 12ನೇ ತಾರೀಕಿನಂದು ತೆರೆಗೆ

ಮಂಗಳೂರು: ನಮ್ಮ ಕನಸು ಬ್ಯಾನರ್ ಅಡಿಯಲ್ಲಿ ಕೆ. ಸುರೇಶ್ ಅವರ ನಿರ್ಮಾಣದ , ರಮೇಶ್ ಶೆಟ್ಟಿಗಾರ್ ಕಥೆ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಸೆಪ್ಟೆಂಬರ್ 12ನೇ ತಾರೀಕಿನಂದು ಕರಾವಳಿಯಾದ್ಯಂತ ಬೆಳ್ಳಿ ತೆರೆಯ ಮೇಲೆ ಬಿಡುಗಡೆಯಾಗಲಿದೆ‌ ಎಂದು ನಟಿ ರೂಪಾ ವರ್ಕಾಡಿ ತಿಳಿಸಿದರು .

ಪಿದಾಯಿ ಚಿತ್ರವು ಕೊಲ್ಕತ್ತ, ಸಿಮ್ಮಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತ ಆಯ್ಕೆಯಾಗುವುದರ ಜೊತೆಗೆ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ ಸ್ಪರ್ಧೆಯಲ್ಲಿದ್ದು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವುದು ವಿಶೇಷವಾಗಿದೆ .

ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕನ್ನಡದ ಖ್ಯಾತ ನಟರಾದ ಶರತ್‌ ಲೋಹಿತಾಶ್ವ , ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೋಳಾರ್, ರೂಪಶ್ರೀ ವರ್ಕಾಡಿ ಸೇರಿ ಹಲವರು ಅಭಿನಯಿಸಿದ್ದಾರೆ .

ರಾಷ್ಟ್ರ ಪ್ರಶಸ್ತಿ ವಿಜೇತ ಜೀಟಿಗೆ ಚಿತ್ರ ಛಾಯಾಗ್ರಾಹಕರಾದ ಉಣ್ಣಿ ಮಾಡವೂರ್‌ರವರು ಈ ಸಿನಿಮಾದ ಛಾಯಾಗ್ರಹಣೆಯನ್ನು ನಿಭಾಯಿಸಿದ್ದಾರೆ. ಎರಡು ಸಲ ರಾಷ್ಟ್ರ ಪ್ರಶಸ್ತಿ ವಿಜೇತರಾಗಿ, ವಿಶ್ವದಲ್ಲೇ ಅತೀಹೆಚ್ಚು ಸಿನಿಮಾ ಸಂಕಲನ ಮಾಡಿ ಧಾಖಲೆ ಮಾಡಿರುವ ಸುರೇಶ್ ಅರಸ್ ಇವರು ಈ ಚಿತ್ರಕ್ಕೆ ಸಂಕಲನಕಾರರಾಗಿದ್ದಾರೆ. ಸಂಭಾಷಣೆಯನ್ನು ರಮೇಶ್ ಶೆಟ್ಟಿಗಾರ್ ಹಾಗೂ ಡಿ.ಬಿ.ಸಿ. ಶೇಖರ್ ಜೊತೆಗೋಡಿ ಬರೆದಿದ್ದಾರೆ.

ಮಲಯಾಳಂ ಚಿತ್ರ ರಂಗದ ಪ್ರಸಿದ್ದ ಕವಿ 5 ಸಲ ಕೇರಳ ಸರಕಾರದ ಪ್ರಶಸ್ತಿ ವಿಜೇತ ಪದ್ಮಶ್ರೀ ಕೈ ತಪ್ರಮ್ ದಾಮೋದರನ್ ನಂಬೂದಿರಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾದ ಸುಧೀರ್ ಅತ್ತಾವರ, ತುಳು ಅಕಾಡೆಮಿ ಪ್ರಶಸ್ತಿ ವಿಜೇತರಾದ ಕುಶಾಲಾಕ್ಷಿ ಕಣ್ವತೀರ್ಥರವರ ಸಾಹಿತ್ಯವಿದ್ದು , ಅಜಯ್ ನಂಬೂದಿರಿಯವರು ಸಂಗೀತ ನೀಡಿದ್ದಾರೆ. ಪುಸಿದ್ದ ಹಾಡುಗಾರರಾದ ಸಂಗೀತ ವಿದ್ಯಾನಿಧಿ ಡಾಕ್ಟರ್ ವಿದ್ಯಾಭೂಷಣ್ ರವರು ಪಪಥಮವಾಗಿ ಈ ಸಿನಿಮಾದಲ್ಲಿ ಹಾಡಿದ್ದಾರೆ . ಹಿನ್ನಲೆ ಗಾಯಕರಾದ ಮೇಧ ವಿದ್ಯಾಭೂಷಣ್, ವಿಜೇಶ್ ಗೋಪಾಲ್‌, ಭಾವನಾ ಮುಂತಾದವರು ಕಂಠದಾನ ಮಾಡಿದ್ದಾರೆ. ತುಳುನಾಡಿನ ವಿಶೇಷತೆಯಾದ ಕುಣಿತ ಭಜನೆಯನ್ನು ಮೊದಲ ಬಾರಿಗೆ ಈ ಸಿನಿಮಾದಲ್ಲಿ ಪ್ರಯೋಗಿಸಲಾಗಿದೆ ಎಂದರು.

ಈ ಚಿತ್ರದಲ್ಲಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಹಃ” ಎಲ್ಲಿ ಸ್ತ್ರೀಯರನ್ನು ಗೌರವಿಸಲಾಗುತ್ತದೋ ಅಲ್ಲಿ ದೇವರು ನೆಲಸುತ್ತಾರೆ } ಎಂಬ ಉಲ್ಲೇಖದೊಂದಿಗೆ ಭೋಜಣ್ಣ ಎಂಬ ಮಹಮ್ಮಾಯಿ ಪಾತ್ರಿಯವರ ಮನೆಗೆ ವಿದ್ಯಾವಂತೆಯೊಬ್ಬಳು ಸೊಸೆಯಾಗಿ ಬಂದಾಗ, ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಕಂಡು ಅವಳು ನಡೆಸುವ ಸಾತ್ವಿಕ ಸಂಘರ್ಷ ಹಾಗೂ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಲು ಭೋಜಣ್ಣ ತೆಗೆದುಕೊಳ್ಳುವ ದೃಢನಿರ್ಧಾರವು ಕಥೆಯ ಜೀವಾಳವಾಗಿರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಸಂತೋಷ್ ಮಾಡ , ನಟರಾದ ಪುಷ್ಪರಾಜ್ ಬೋಳಾರ್ , ಖುಷಿ , ಮೀನಾಕ್ಷಿ ರಾಮ ಚಂದ್ರ , ಡಿ.ಬಿ.ಸಿ. ಶೇಖರ್ ಉಪಸ್ಥಿತತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!