ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು.

ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ ಪಡೆದಿರುವ ಶಾಲಾ ಪ್ರಾಂಶುಪಾಲ ಶ್ರೀಯುತ ಅಬ್ದುಲ್ ಖಾದರ್  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಇಂತಹ ಕಲಾ ಮತ್ತು ಕೌಶಲ್ಯ ಸ್ಪರ್ಧೆಗಳು ಮಕ್ಕಳಿಗೆ ಹೊಸ ಅನುಭವ ನೀಡುತ್ತವೆ ಮತ್ತು ನೈಜ ಜೀವನದ ಕೌಶಲ್ಯಗಳನ್ನು ಮುನ್ನಡೆಸಲು ಉತ್ತೇಜನವನ್ನು ನೀಡುತ್ತವೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ಬಳಿಕ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ಖುರಾನ್ ಪಠಣ ಸ್ಪರ್ಧೆ, ಭಾಷಣ, ಗಾಯನ, ನಾಟಕ, ಕವಿತೆ, ಚಿತ್ರಕಲೆ, ಕರಾಟೆ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಿತು.

 ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಿದ ಈ ಕಾರ್ಯಕ್ರಮವು ಮನರಂಜನೆಯ ಜೊತೆಯಾಗಿ ವಿದ್ಯಾರ್ಥಿಗಳಲ್ಲಿ ವಿಶೇಷ ಆಸಕ್ತಿ ಹಾಗೂ ಪ್ರೋತ್ಸಾಹವನ್ನು ಸೃಷ್ಟಿಮಾಡಿತು. ಇದರೊಂದಿಗೆ ವಿದ್ಯಾರ್ಥಿಗಳಲ್ಲಿ ಕಲೆಯ ಪ್ರಾಮುಖ್ಯತೆ, ವೈವಿಧ್ಯಮಯ ಕೌಶಲ್ಯಗಳ ಮಹತ್ವ, ಹಾಗೂ ಸ್ಪರ್ಧಾತ್ಮಕ ಪರಿಸರದಲ್ಲಿ ಉತ್ಕೃಷ್ಟತೆಯನ್ನು ಹೇಗೆ ಸಾಧಿಸಬೇಕೆಂದು ಪ್ರಜ್ಞೆ ಮೂಡಿಸಿದೆ.

ಒಟ್ಟಾರೆಯಾಗಿ, ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಕಲೆ ಮತ್ತು ಕೌಶಲ್ಯದ ಜೀವನದಲ್ಲಿ ಮಹತ್ವದ ಹೆಜ್ಜೆಯಾಯಿತು.ಕಾರ್ಯಕ್ರಮಕ್ಕೆ ಶಾಲಾ ಅಧ್ಯಾಪಕರುಗಳು ನೇತೃತ್ವ ನೀಡಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!