ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮ ಸೆಪ್ಟೆಂಬರ್ 21ರಂದು

ಮಂಗಳೂರು:ಬನ್ನಂಜೆ ಗೋವಿಂದಾಚಾರ್ಯರ ಜನ್ಮದ 90ನೇ ವರ್ಷದ ಅಂಗವಾಗಿ ‘ವಿಶ್ವ ಬನ್ನಂಜೆ 90ರ ನಮನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದ ಆವರಣದಲ್ಲಿ ಪೂರ್ಣ ದಿನದ ಕಾರ್ಯಕ್ರಮದೊಂದಿಗೆ ನಡೆಸಲಾಗುವುದು ಎಂದು ತುಳುನಾಡು ಶಿಕ್ಷಣ ಸಂಸ್ಥೆ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ.

ನಗರದ ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಬನ್ನಂಜೆಯವರು ಬದುಕಿದ್ದರೆ ಈಗ 90 ವರ್ಷ ಪೂರೈಸುತ್ತಿದ್ದರು. ಆ ನೆನಪಿಗಾಗಿ ಕರ್ನಾಟಕ ಮಾತ್ರವಲ್ಲದೆ ಹೃಷಿಕೇಶ ಮತ್ತು ಅಮೆರಿಕ ಸೇರಿದಂತೆ ಹಲವು ಕಡೆಗಳಲ್ಲಿ ಈ ನಮನ ಕಾರ್ಯಕ್ರಮಗಳು ನಡೆಯಲಿವೆ. ಇದರ ಪರಿಕಲ್ಪನೆ ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು ಇವರದು. ಸ್ಥಳೀಯವಾಗಿ ಮಂಗಳೂರಿನ ಅಭಿಮಾನಿಗಳೇ ಇದರ ಮುಖ್ಯ ಆಯೋಜಕರು” ಎಂದರು.

“ಈಗಾಗಲೇ ಉಡುಪಿಯಲ್ಲಿ ಆಗಸ್ಟ್ 3ರಂದು ಬನ್ನಂಜೆಯವರ ಜನ್ಮದಿನದಂದು ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ವರ್ಷ ಪೂರ್ತಿ ತಿಂಗಳಿಗೆ ಎರಡು ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯಿದ್ದು, ಅದರ ಮುಂದಿನ ಹಂತ ಮಂಗಳೂರಿನಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಆಶೀರ್ವಾದವಿದೆ” ಎಂದು ತಿಳಿಸಿದರು.

ಈ ಕಾರ್ಯಕ್ರಮದ ಗೌರವಾಧ್ಯಕ್ಷರು ಡಾ. ಎಂ.ಬಿ. ಪುರಾಣಿಕ್ ಹಾಗೂ ಕಾರ್ಯಾಧ್ಯಕ್ಷರು ಸುಧಾಕರ ರಾವ್ ಪೇಜಾವರ ಆಗಿದ್ದಾರೆ. ಸಮಿತಿಯಲ್ಲಿ ಹಲವಾರು ಮಹನೀಯರು ಪಾಲ್ಗೊಂಡಿದ್ದು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಮಂಗಳೂರಿನ ಶ್ರೀರಾಮಕೃಷ್ಣ ಮಠದಲ್ಲಿ ಶ್ರೀ ಜಿತಕಾಮಾನಂದ ಸ್ವಾಮೀಜಿಯವರ ಅನುಗ್ರಹದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 21ರಂದು ನಡೆಯಲಿರುವ ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಸ್ವಾಗತವಿದೆ. ಎಂದು ಆಯೋಜಕರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುಧಾಕರ್ ರಾವ್ , ಶ್ರೀಶಾ ಮುಂತಾದವರು ಉಪಸ್ಥಿತತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!