ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ.

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ತಿಂಗಳ ಬಳಿಕ ಕಳ್ಳತನ ಮಾಡಿದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ತ್ರಿಶೂರ್ ಜಿಲ್ಲೆಯ ಕೇರಳ ರಾಜ್ಯದ ನಜೀರ್ ಪುನ್ನಯ್ಯೂರು ಎಂಬಾತನ ಬಂಧಿಸಲಾಗಿದೆ.


ಅಗಸ್ಟ್ 15 ರಂದು ಕುಂದಾಪುರದ ನಿವಾಸಿಯಾಗಿರುವ ರಂಗನಾಥ ಬೆಳ್ಳಾಲ ಅವರು ಕೊಟ್ಟಿಗೆ ಹಾರಕ್ಕೆ ಹೋಗುವ ಉದ್ದೇಶದಿಂದ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಇವರ ಕಿಸೆಯಲ್ಲಿದ್ದ 50 ಸಾವಿರದ ಎರಡು ಕಟ್ಟನ್ನು ಕಿಸೆಗೆ ಕೈ ಹಾಕಿ ಕಳವು ಮಾಡಲಾಗಿತ್ತು.
ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ಷು , ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಪತ್ತೆಗಾಗಿ ತಂಡವನ್ನು ರಚಿಸಲಾಗಿತ್ತು.ನಗರ ಪೋಲೀಸರ ತಂಡ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!