ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು.ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಹೆಗ್ಡೆ ಅವರು ಈ ಯೋಜನೆಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.