ಯುವತಿ ಜತೆಗಿನ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕ ಆತ್ಮಹತ್ಯೆ

ಉಡುಪಿ: ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ನ ಖಾಸಗಿ ಲಾಡ್ಜ್ ನಲ್ಲಿ ನಡೆದಿದೆ.


ನಿಟ್ಟೆಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆಗೆ ಶರಣಾದ ಯುವಕ. ಪ್ರೇಯಸಿಯ ಜೊತೆಗಿರುವ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಆತ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಬ್ಲ್ಯಾಕ್ ಮೇಲ್ ಮಾಡಿರುವ ನಾಲ್ಕು ಮಂದಿಯ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!