ಮಂಜೇಶ್ವರ : ನಾಡಿನ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕನೊಬ್ಬ ಜ್ವರದ ಭಾಧೆಯಿಂದ ದುರ್ದೈವವಶಾತ್ ತನ್ನ ಅಮೂಲ್ಯ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಉದ್ಯಾವರ ನಿವಾಸಿ ಅಬ್ದುಲ್ ಜಬ್ಬಾರ್ (47) ಮೃತ ದುರ್ದೈವಿ.ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದ ಅಬ್ದುಲ್ ಜಬ್ಬಾರ್ ಸಮಾಜ ಸೇವೆಗಾಗಿ ತನ್ನ ಜೀವನವನ್ನು ಅರ್ಪಿಸಿದ್ದ ಅನಾಥ ಮಕ್ಕಳಿಗೆ ಶಿಕ್ಷಣ, ಹಿಂದುಳಿದ ಕುಟುಂಬಗಳಿಗೆ ಆಹಾರ ವಿತರಣೆ ಹಾಗೂ ಪರಿಸರ ಸಂರಕ್ಷಣೆ ಎಂಬಂತಹ ಅನೇಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕ ಸ್ಥಳೀಯ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದಿದ್ದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣಿಸಲಿಲ್ಲ.ಶನಿವಾರದಂದು ಮನೆಯಲ್ಲಿ ತಲೆ ತಿರುಗಿ ಬಿದ್ದಾಗ ಊರವರು ಕೂಡಲೇ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಆತ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ. ವೈದ್ಯರ ಪ್ರಕಾರ, ತಡವಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಹಾಗೂ ಸೋಂಕು ಶರೀರದ ಎಲ್ಲಾ ಭಾಗಗಳಿಗೆ ಹರಡಿರುವುದು ದುರಂತಕ್ಕೆ ಕಾರಣವಾಗಿದೆನ್ನಲಾಗಿದೆ.ಜಬ್ಬಾರ್ ನ ಅಗಲಿಕೆ ನಾಡನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.