ಅ.15ರಂದು ಮಂಜೇಶ್ವರದಲ್ಲಿ ‘ಪುವೆಂಪು ನೆನಪು’ ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು – ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಪ್ರತಿಷ್ಠಾನ, ಕಾಸರಗೋಡು ಹಾಗೂ ಕೇರಳ ತುಳು ಅಕಾಡೆಮಿ, ಮಂಜೇಶ್ವರ ಇವುಗಳ ಸಂಯುಕ್ತ ಆಶ್ರಯದಲ್ಲಿ “ಪುವೆಂಪು ನೆನಪು-2025” ಕಾರ್ಯಕ್ರಮವು ಅಕ್ಟೋಬರ್ . 15ರಂದು ಬೆಳಿಗ್ಗೆ 9 ರಿಂದ ದುರ್ಗಿಹಳ್ಳದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ತಿಳಿಸಿದರು.

NAMMA MEDIA 24X7

ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕಾಸರಗೋಡಿನ ಅನನ್ಯ ರತ್ನ, ಚತುರ್ಭಾಷಾ ವಿದ್ವಾಂಸ ದಿ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ ಅವರ ಅನನ್ಯ ಕೊಡುಗೆಯನ್ನು ನೆನಪಿನಲ್ಲಿ ಇಟ್ಟುಕೊಂಡು ಅವರ ನಾಮದಲ್ಲಿ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದ್ದು . ಈ ಭಾರಿ ಹಿರಿಯ ಸಾಹಿತಿ, ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ‘ಪುವೆಂಪು ಪ್ರಶಸ್ತಿ -2025’ ನೀಡಿ ಗೌರವಾರ್ಪಣೆಯನ್ನು ಮಾಜಿ ಸಚಿವರು , ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾದ ಹೆಚ್. ಎಂ. ರೇವಣ್ಣ ನೆರವೇರಿಸಲಿದ್ದಾರೆ .

ಈ ಸಂದರ್ಭದಲ್ಲಿ ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡಲಿದ್ದು ಸಮಾರಂಭಕ್ಕೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಉದ್ಘಾಟಿಸಲಿದ್ದು, ಮಂಗಳೂರು ಬೆಸೆಂಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ನುಡಿನಮನ ಸಲ್ಲಿಸುವರು ಎಂದರು .

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯಕಟ್ಟೆ, ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕುಮಾ‌ರ್ ಕೊಡಿಯಾಲ್ ಬೈಲ್, ಪುವೆಂಪು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಎ ಶ್ರೀನಾಥ್, ಪುವೆಂಪು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಕವಿ ರಾಧಾಕೃಷ್ಣ ಕೆ ಉಳಿಯತಡ್ಕ, ಕಾಸರಗೋಡಿನ ಕನ್ನಡ ಹೋರಾಟಗಾರ ಟಿ ಶಂಕರನಾರಾಯಣ ಭಟ್ , ಪುವೆಂಪು ನೆನಪು ಸಂಚಾಲಕ ರವಿ ನಾಯಿಕಾಪ್ ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!