ಕೊಡ್ಲಮೊಗರು: ವರ್ಕಾಡಿ ಪಂಚಾಯತ್ ನಲ್ಲಿ ಸಿಪಿಐಎಂ ಪಕ್ಷದ ಸಂಘಟನೆಗಾಗಿ ಹಗಲಿರುಳೆನ್ನದೆ ದುಡಿದು, ತನ್ನ ಜೀವನವನ್ನೇ ಕಾರ್ಮಿಕ ವರ್ಗದ ಹಿತಕ್ಕಾಗಿ ಮುಡಿಪಾಗಿಸಿದ, ಹಲವಾರು ವರ್ಷಗಳ ಕಾಲ ಲೋಕಲ್ ಸಮಿತಿ ಕಾರ್ಯದರ್ಶಿಯಾಗಿ ಸೇವೆಗೈದ ಕಾಂ. ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವಾದ ಸಿಪಿಐಎಂ ಕೊಡ್ಲಮೊಗರು ಲೋಕಲ್ ಸಮಿತಿ ಕಚೇರಿಯ ಉದ್ಘಾಟನೆಯನ್ನು ಅಕ್ಟೋಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಎಂ. ವಿ. ಗೋವಿಂದನ್ ಮಾಸ್ಟರ್ ನಿರ್ವಹಿಸಲಿದ್ದಾರೆ.
ರಾಜ್ಯ ಸಮಿತಿ ಸದಸ್ಯರಾದ, ಕೆ. ಪಿ. ಸತೀಶ್ ಚಂದ್ರನ್, C.H ಕುಂಞಂಬು MLA, ಜಿಲ್ಲಾ ಕಾರ್ಯದರ್ಶಿ M ರಾಜಗೋಪಾಲನ್, MLA, ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯರಾದ KV ಕುಂಞರಾಮನ್, V V. ರಮೇಶನ್, K.R ಜಯಾನಂದ, V. P. P ಮುಸ್ತಾಫಾ, CPIM ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್, ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಮೊದಲಾದವರು ಭಾಗವಹಿಸಲಿರುವರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಜನತೆ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸ್ವಾಗತ ಸಮಿತಿ ಚೆಯರ್ ಮೇನ್ ಮೋಹನ. ಬಿ ಮತ್ತು ಕನ್ವಿನರ್ ಜಯರಾಮ ಎನ್. ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.