ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ (23) ಮೃತಪಟ್ಟ ಯುವಕನಾಗಿದ್ಧಾನೆ.
ಸರ್ವೆ ಇಲಾಖೆಯ ಗುತ್ತಿಗೆ ಆಧಾರದ ಉದ್ಯೋಗಿಯಾಗಿರುವ ಈತ ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಬರುವ ಸಂಜೆ ವೇಳೆ ತುಂಬೆ ಸಮೀತ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.