ಮಂಜೇಶ್ವರ: ಕೇರಳ ಎದುರಿಸುತ್ತಿರುವ ನಿರುದ್ಯೋಗ ಮತ್ತು ಅಭಿವೃದ್ಧಿ ಕುಂಠಿತವನ್ನು ಪರಿಹರಿಸಲು ರಾಜಕೀಯ ಬದಲಾವಣೆ ಅತ್ಯಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು. ಅವರು ಬಿಜೆಪಿ ಮಂಜೇಶ್ವರ ಪಂಚಾಯತ್ ಚುನಾವಣಾ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು .
ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಅಡ್ವ. ಬಾಲಕೃಷ್ಣ ಶೆಟ್ಟಿ,ಕೆ.ಸತೀಶ್ ಚಂದ್ರ ಭಂಡಾರಿ, ರಾಜ್ಯ ಪರಿಷತ್ ಸದಸ್ಯ ಹರಿಶ್ಚಂದ್ರ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಜಿಲ್ಲಾ ಸಮಿತಿ ಸದಸ್ಯ ಯಾದವ ಬಡಾಜೆ ಉಪಸ್ಥಿತರಿದ್ದರು .