ಗುಂಪು ಕೂಡಿ ಗಲಾಟೆ ಮಾಡಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಮಂಚಿಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಮಂಚಿ ಗ್ರಾಮದಲ್ಲಿ ಬೀಟ್ ಸಂಚರಿಸುತ್ತಿರುವಾಗ ಮಂಚಿ ಕಟ್ಟೆ ಎಂಬಲ್ಲಿ ಯುವಕರು ಗಲಾಟೆ ಮಾಡಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ಬಾತ್ಮೀದಾರರಿಂದ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ನೋಡಿದಾಗ ಜನರು ಗುಂಪು ಸೇರಿದ್ದರು.
ಆ ಗುಂಪಿನಲ್ಲಿ ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜೇಯ್, ಜಮೀರ್, ಮಹಮ್ಮದ್ ಮುಸ್ತಫ್ ರವರು ಗಲಾಟೆ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ದ್ವೇಷವನ್ನುಂಟು ಮಾಡುವ, ಸೌಹಾರ್ದತೆಗೆ ಬಾಧಕವಾಗುವ ರೀತಿಯಲ್ಲಿ ಪರಸ್ಪರವಾಗಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಹೊಡೆದಾಡಿಕೊಂಡಿರುವುದಾಗಿದೆ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 153/2025 ಕಲಂ: 189(2),191(2),196(1)(a),196(1)(b), R/W 190 BNS ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.