ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ಬೋರ್ಡ್ ಉದ್ಘಾಟನೆ .

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ ನೂತನ ಡಿಜಿಟಲ್ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಈ ಡಿಜಿಟಲ್ ಬೋರ್ಡ್‌ನ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮಾಂತೇರೋ ಲೋಕಾರ್ಪಣೆ ಗೈದರು.ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಅಧ್ಯಕ್ಷತೆ ವಹಿಸಿದರು.

ಗ್ರಾಮದ ನಾಗರಿಕರಿಗೆ ನವೀನ ಮಾಹಿತಿ ತಕ್ಷಣ ಲಭ್ಯವಾಗುವಂತಾಗಿಸಲು ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಈ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ದಿನನಿತ್ಯದ ಪಠ್ಯಗಳು, ಯೋಜನೆಗಳು, ಪ್ರಕಟಣೆಗಳು ಹಾಗೂ ಸರ್ಕಾರಿ ಸೂಚನೆಗಳ ಬಗ್ಗೆ ಈ ಮೂಲಕ ಮಾಹಿತಿ ಪಡೆಯಬಹುದಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು. ಈ ಯೋಜನೆ ಗ್ರಾಮದ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ನಾಂದಿ ಹಾಡಲಿದೆ ಎಂಬ ಭರವಸೆ ವ್ಯಕ್ತವಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!