ಪತ್ರಕರ್ತ ಗಿರೀಶ್ ಪಿಎಂ ಇವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….!

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಗಿರೀಶ್ ಪಿಎಂ ಇವರು ಮುಡೇರಿಸಿಕೊಂಡಿದ್ದಾರೆ.

ಪ್ರಶಸ್ತಿ ಪ್ರಧಾನವನ್ನು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳರು ಹಸ್ತಾತರಿಸಿದರು. ಪತ್ರಿಷ್ಠಾನವು ಪ್ರಶಸ್ತಿಯನ್ನು ಮಾಧ್ಯಮ ಮತ್ತು ಸಾಹಿತ್ಯ ಎಂಬ ವಿಭಾಗದಲ್ಲಿ ನೀಡಿರುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಸದಸ್ಯರಾದ ಜಗದೀಶ್ ಕೂಡ್ಲು, ಡಾ ವೆಂಕಟರಮಣ ಹೊಳ್ಳ ಸಹಿತ ಮುಂತಾದವರು ಉಪಸ್ಥಿತರಿದ್ದರು.ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ 60 ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!