ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ.
ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದರು.
ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಯಶಸ್ವಿಯಾಗಿದೆ.