ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ರಾಜ್ಯ ಮುಖ್ಯಮಂತ್ರಿಗಳ ಪತ್ರ

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು(ನ.28) ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ನೀಡಿದ್ದು ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು.

ಈ ಪತ್ರದಲ್ಲಿರುವಂತ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರಿಸಲಾಗಿದೆ.
ಕರ್ನಾಟಕದಲ್ಲಿ ಮಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್) ಬೆಳೆಗಳ ತೀವ್ರು ಬೆಲೆ ಕುಸಿತದಿಂದ ರೈತರು ತೀವು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಕಾರಣ ಈ ಬಗ್ಗೆ, ನಿಮ್ಮ ಗಮನಕ್ಕೆ ತಂದು ಬೆಂಬಲ ಬೆಲೆಯಲ್ಲಿ ರೈತರಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ಪತ್ರ ಬರೆಯಲಾಗಿದೆ.

ನಮ್ಮ ಲಕ್ಷಾಂತರ ರೈತರು ಜೀವನೋಪಾಯಕ್ಕಾಗಿ ಕೃಷಿ ಮಾಡಿರುವ ಬೆಳಗಳನ್ನು ಖರೀದಿಸುತ್ತಿರುವ ಬೆಲೆ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಬಹಳಷ್ಟು ಕಡಿಮೆ ಇದ್ದು ಕೃಷಿಕರಲ್ಲಿ ವ್ಯಾಪಕ ಸಂಕಷ್ಟವನ್ನು ಸೃಷ್ಟಿಸಿದ. ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕವು 17,94 ಲಕ್ಷ ಹೆಕ್ಟೇರ್ ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹಕ್ಕೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳದಿದ್ದು ರಾಜ್ಯವು 54.74 ಲಕ್ಷ ಮೆಟ್ರಿಕ್ ಟನ್ ಗಳಿಗಿಂತ ಹೆಚ್ಚು ಮಕ್ಕಜೋಳ ಮತ್ತು 1.983 ಲಕ್ಷ ಮೆಟ್ರಿಕ್ ಟನ್‌ಗಳನ್ನು ಹೆಸರು ಕಾಳಿನ ಅಂದಾಜು ಉತ್ಪಾದನೆಯನ್ನು ನಿರೀಕ್ಷಿಸುತ್ತಿದೆ. ಇದು ಸಮೃದ್ಧಿಗೆ ಒಂದು ಅವಕಾಶವಾಗಿರಬೇಕಾಗಿದ್ದರೂ, ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಗಳು ಇದನ್ನು ಬಿಕ್ಕಟ್ಟಾಗಿ ಪರಿವರ್ತಿಸಿವೆ.

ಕೇಂದ್ರ ಸರ್ಕಾರವು ಮಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2400 ಮತ್ತು ಹಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ ಗೆ ₹8768 ರಂತ MSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್ಗೆ ₹1600-1800 ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ ₹5400 ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ.

ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳನ್ನು ಮಕ್ಕಜೋಳ ಲಭ್ಯವಿದೆ. ರಾಜ್ಯದಲ್ಲಿ ರೈತರ ತೀವ್ರ ಸಂಕಷ್ಟವನ್ನು ತಪ್ಪಿಸಲು ಮತ್ತು ನಮ್ಮ ರಾಷ್ಟ್ರದ ಕೃಷಿ ಬೆನ್ನೆಲುಬಾದವರ ಬದುಕನ್ನು ಸುಸ್ಥಿರವಾಗಿಡಲು ಮಾನ್ಯ ಪ್ರಧಾನಿಗಳು ಮನಸ್ಸು ಮಾಡಬೇಕಾಗಿ, ರೈತರ ಹಿತ ಕಾಯಬೇಕಾಗಿ ವಿನಂತಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!