ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು; ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ ಇಂಡಿಗೋ ಸಂಸ್ಥೆ

ನವದೆಹಲಿ: ದೇಶಾದ್ಯಂತ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.ಈ ಕುರಿತು ಮಾಹಿತಿ ಡಿಜಿಸಿಎಗೆ ನೀಡಿರುವ ಇಂಡಿಗೋ ಸಂಸ್ಥೆ, ಸದ್ಯಕ್ಕೆ ಈ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ. ಇನ್ನೂ ಕಳೆದೆರಡು ದಿನಗಳಿಂದ ಸಮಸ್ಯೆ ಅನುಭವಿಸುತ್ತಿರುವ ಗ್ರಾಹಕರಲ್ಲಿ ಕ್ಷಮೆಯಾಚಿಸಿದೆ.

ಇನ್ನೂ ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಸಿಬ್ಬಂದಿ ಸಮಸ್ಯೆಯಿಂದ ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಡಿ.5ರಂದು ಕೂಡ ದೇಶಾದ್ಯಂತ ವಿಮಾನ ಸಂಚಾರ ಸಮಸ್ಯೆ ಮುಂದುವರಿದಿದ್ದು, ಇಂಡಿಗೋ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ದೆಹಲಿಯಲ್ಲಿ ನಿರ್ಗಮನ ಮತ್ತು ಆಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನ, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ವಿಮಾನ ಹಾಗೂ ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳು ಸೇರಿದಂತೆ ದೇಶ್ಯಾದ್ಯಂತ 500ಕ್ಕೂ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿಮಾನಗಳ ವಿಳಂಬ, ರದ್ದಾದ ಹಿನ್ನೆಲೆ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು, ಎಕ್ಸ್ ಖಾತೆಯಲ್ಲಿ ಇಂಡಿಗೋ ಸಂಸ್ಥೆಯನ್ನು ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇಂಡಿಗೋ ಕೌಂಟರ್‌ಗಳ ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಲು ಜನರು ಕ್ಯೂ ನಿಂತಿದ್ದಾರೆ.


    SHARE
    Loading spinner

    Leave a Reply

    Your email address will not be published. Required fields are marked *

    error: Content is protected !!