ಮಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಪೊಲೀಸ್ ಇಲಾಖೆಗಳ , ಜಂಟಿ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತ್ತು .
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಮಾತನಾಡಿ , ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ ಭಾರತದ ನಾಗರಿಕರಿಗೆ ಮುಖ್ಯವಾಗಿದೆ . ಡಾ.ಬಿ.ಆರ್.ಅಂಬೇಡ್ಕರ್ ಅವರು ನಾಗರಿಕರಿಗೆ ಸರಕಾರದಿಂದ ಬರುವ ಎಲ್ಲಾ ಅವಶ್ಯಕ ಸಹಾಯ ಹಸ್ತವನ್ನು ನೀಡಬಹುದು ಎಂಬುದಾಗಿ ಸಂವಿಧಾನದಲ್ಲಿ ಅಳವಡಿಸಿದ್ದಾರೆ . ಅವರ ಬೋಧನೆಗಳು , ಒಳ್ಳೆಯ ವಿಚಾರ ಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಭಾರತೀಯ ನಾಗರಿಕರಾಗಿ ಹೊರಹೊಮ್ಮುತ್ತೇವೆ ಎಂದರು .
ಈ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ನರ್ವಡೆ ವಿನಾಯಕ್ ಕಾರ್ಭಾರಿ , ವಿವಿಧ ಜಿಲ್ಲಾಡಳಿತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು .